ನವದೆಹಲಿ: ಮಾಜಿ ಸಂಸದೆ, ಕಾಂಗ್ರೆಸ್ ನಾಯಕಿ ಪ್ರಿಯಾ ದತ್ ಅವರನ್ನು ಎಐಸಿಸಿ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲಾಗಿದೆ.
ಈ ಕುರಿತು ಸ್ವತ; ಪ್ರಿಯಾ ದತ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಎಐಸಿಸಿ ಕಾರ್ಯದರ್ಶಿ ಕರ್ತವ್ಯಗಳಿಂದ ನನ್ನನ್ನು ಬಿಡುಗಡೆ ಮಾಡಲಾಗಿದೆ, ಈ ಸಂಬಂಧ ನನಗೆ ಮಾಹಿತಿ ಸಿಕ್ಕಿದ್ದು, ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ, ಇಷ್ಟು ವರ್ಷ ಪಕ್ಷದಲ್ಲಿ ದುಡಿಯಲು ಅವಕಾಶ ನೀಡಿದ್ದ ರಾಹುಲ್ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ, ಎಐಸಿಸಿ ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ಹಾಗೂ ನನಗೆ ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ತೊರೆಯುವ ಬಗ್ಗೆ ಯಾವುದೇ ಹೇಳಿಕೆಗಳನ್ನೂ ನೀಡಿಲ್ಲ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ವಿರುದ್ಧವಾಗಿ ಪ್ರಿಯಾ ದತ್ ಟ್ವೀಟ್ ಮಾಡಿದ್ದರು, ರೋಗಗ್ರಸ್ಥ ಕಾಂಗ್ರೆಸ್ ಅನ್ನು ಆರೋಗ್ಯಯುತವಾಗಿಸಲು ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದರು.