ದಲೈಲಾಮಾ ಹತ್ಯೆಗೆ ಸಂಚು: ಬಂಧಿತ ಉಗ್ರನಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೌದ್ಧ ಧರ್ಮಗುರು ದಲೈಲಾಮಾ ಹತ್ಯೆಗೆ ಜೆಎಂಬಿ (ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ) ಸಂಘಟನೆಯ ಉಗ್ರರು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ.

ದಲೈಲಾಮಾರನ್ನ ಬಾಂಬ್​ ಸ್ಫೋಟಿಸಿ ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಬಂಧಿತ ಉಗ್ರರ ವಿಚಾರಣೆ ವೇಳೆ ತಿಳಿದುಬಂದಿದೆ. ಉಗ್ರರು 2018ರ ಆರಂಭದಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು.

ರಾಮನಗರದಲ್ಲಿ ಬಂಧಿತನಾಗಿದ್ದ ಉಗ್ರ ಮುನೀರ್ ಶೇಖ್ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ. ಬೌದ್ಧ ಧರ್ಮಗುರು ದಲೈಲಾಮಾ ಅವರು ರೋಹಿಂಗ್ಯಾಗಳಿಗೆ ವಿರೋಧಿಯಾಗಿದ್ದರು. ರೋಹಿಂಗ್ಯಾಗಳಿಗೆ ವಿರೋಧಿಯಾಗಿದ್ದರಿಂದ ಜೆಎಂಬಿ ಉಗ್ರ ಸಂಘಟನೆ ಹತ್ಯೆಗೆ ಸಂಚು ರೂಪಿಸಿತ್ತು ಎಂಬ ಮಾಹಿತಿಯನ್ನು ಬಾಯ್ಬಿಟ್ಟಿದ್ದಾನೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ