ನವದೆಹಲಿ: ಪಿ ಎನ್ ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಉದ್ಯಮಿ ನೀರವ್ ಮೋದಿ ಅವರಿಗೆ ಸಂಬಂಧಿಸಿದ 637 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.
ಭಾರತ ಸೇರಿ 5 ದೇಶಗಳಲ್ಲಿನ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ, ಸುಮಾರು 22.69 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಲಂಡನ್, ನ್ಯೂಯಾರ್ಕ್ ಹಾಗೂ ಮುಂಬೈನಲ್ಲಿರುವ ಆಸ್ತಿಗಳನ್ನು ಇಡಿ ವಶಕ್ಕೆ ಪಡೆದಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಜ್ರ ವ್ಯಾಪಾರಿ ನೀರವ್ ಮೋದಿ ಹಾಗೂ ಅವರ ಚಿಕ್ಕಪ್ಪ ಛೋಕ್ಸಿ 13,400 ಕೋಟಿ ರೂ. ಸಾಲ ಪಡೆದು ಹಿಂದಿರುಗಿಸಲಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.