ಬಿಜೆಪಿ ಕಾರ್ಯಾಲಯದಲ್ಲಿ ಗಾಂಧಿಜೀ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ

ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಹಾತ್ಮ ಗಾಂಧಿ ಜೀ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವರು ಪುಷ್ಪಾರ್ಚನೆ ಮಾಡಿ ನಮನಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ವಿಕ್ರಮಾರ್ಜುನ ತಿಂಗಳೆ, ಕಾರ್ಯಾಲಯ ಕಾರ್ಯದರ್ಶಿ ಗಣೇಶ ಯಾಜಿ, ಸಹ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರುತಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ತಮ್ಮೇಶ ಗೌಡ, ಪಕ್ಷದ ಕಾರ್ಯಕರ್ತರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ