ಭುಗಿಲೆದ್ದ ಕಿಸಾನ್ ಕ್ರಾಂತಿ: ಕೇಂದ್ರದ ವಿರುದ್ಧ ರೈತರ ಆಕ್ರೋಶ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿರುವ ರೈತರು, ಕೇಂದ್ರ ಸರ್ಕಾರ ನ್ನಮ್ಮ ಸಮಸ್ಯೆ ಬಗೆಹರಿಸದಿದ್ದರೆ ನಾವೇನು ಪಾಕಿಸ್ತಾನ, ಬಾಂಗ್ಲಾದೇಶದ ಸಹಾಯ ಕೇಳಬೇಕೆ ಎಂದು ಕಿಡಿಕಾರಿದ್ದಾರೆ.

ಸಾಲಮನ್ನಾ,ವಿದ್ಯುತ್, ಪೆಟ್ರೋಲ್​, ಡೀಸೆಲ್​ ದರ ಇಳಿಕೆ, ಸ್ವಾಮಿನಾಥನ್​ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಉತ್ತರ ಪ್ರದೇಶದ ರೈತರು ಭಾರತೀಯ ಕಿಸಾನ್​ ಯೂನಿಯನ್​ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಕಿಸಾನ್​ ಕ್ರಾಂತಿ ಪಾದಯಾತ್ರೆ ವಿಕೋಪಕ್ಕೆ ತುರುಗಿದ್ದು, ರೈತರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶದಿಂದ ಪಾದಯಾತ್ರೆ ಆರಂಭ ಮಾಡಿದ್ದ ರೈತರು ರಾಷ್ಟ್ರ ರಾಜಧಾನಿಗೆ ತೆರಳುತ್ತಿರುವಾಗ ಅವರನ್ನು ದೆಹಲಿ-ಉತ್ತರ ಪ್ರದೇಶದ ಗಡಿಯಲ್ಲೇ ತಡೆಯಲಾಗಿದೆ. ಉತ್ತರಪ್ರದೇಶ, ಉತ್ತರಾಖಂಡ ಪಂಜಾಬ್ ಹಾಗೂ ಹರಿಯಾಣ ರಾಜ್ಯದ ಸುಮಾರು 60 ಸಾವಿರಕ್ಕೂ ಅಧಿಕ ರೈತರು ರಾಜ್ ಘಾಟ್ ಬಳಿ ಕಿಸಾನ್ ಕ್ರಾಂತಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಕೇಂದ್ರ ಸರ್ಕಾರ ನಮ್ಮ ಸಮಸ್ಯೆಗಳನ್ನು ಆಲಿಸಲು ನಿರಾಕರಿಸಿದರೆ ನಾವು ಯಾರ ಬಳಿ ನೆರವು ಕೇಳಬೇಕು, ಪಾಕಿಸ್ತಾನ ಅಥವಾ ಬಾಂಗ್ಲಾದೇಶಗಳ ಬಳಿ ನೆರವು ಕೇಳಬೇಕೆ ಎಂದು ಪ್ರಶ್ನಿಸಿದ್ದಾರೆ.

ಉತ್ತರಪ್ರದೇಶ-ದೆಹಲಿ ಗಡಿಯಲ್ಲೇಕೆ ನಮ್ಮನ್ನು ತಡೆ ಹಿಡಿದಿದ್ದೀರಿ? ನಮ್ಮ ಪ್ರತಿಭಟನೆ ಶಾಂತಿಯುತವಾಗಿ ಸಾಗುತ್ತಿದ್ದು, ನಮ್ಮ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಬಳಿ ಹೇಳಬೇಕಿದೆ. ಈ ನಿಟ್ಟಿನಲ್ಲಿ ನಮ್ಮನ್ನು ದೆಹಲಿ ಪ್ರವೇಶಿಸಲು ಬಿಡುವಂತೆ ಪ್ರತಿಭಟನಾ ನಿರತ ರೈತರು ಒತ್ತಾಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ