ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಹತ್ವದ ಮಾತುಕತೆ

ಬೆಂಗಳೂರು, ಅ.2- ಖಾಸಗಿ ಹೋಟೆಲ್‍ವೊಂದರಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಹತ್ವದ ಮಾತುಕತೆ ನಡೆಸಿದರು.
ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೇಮಕ, ಸಂಪುಟ ಪುನಾರಚನೆ, ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದರು.
ಇಬ್ಬರು ಒಟ್ಟಿಗೆ ಉಪಹಾರ ಸೇವಿಸಿ ಕೆಲ ಸಮಯ ಮಾತುಕತೆ ನಡೆಸಿ ನಂತರ ವಿಧಾನಸೌಧಕ್ಕೂ ಒಟ್ಟಿಗೆ ಆಗಮಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ