ಬೆಂಗಳೂರು, ಅ.2- ನಗರವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಗಂಗಾಂಬಿಕೆ ಇಂದಿಲ್ಲಿ ತಿಳಿಸಿದರು.
ಪ್ಲಾಸ್ಟಿಕ್ ಉತ್ಪನ್ನ ಬಳಕೆ ಮಾಡದಿರುವ ಕುರಿತಂತೆ ಬಿಬಿಎಂಪಿ ವತಿಯಿಂದ ಆಯೋಜಿಸಿದ್ದ ಪ್ಲಾಗ್ರನ್ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹಾಗೂ ಪ್ಲಾಸ್ಟಿಕ್ ಉತ್ಪನ್ನ ಬಳಕೆ ಮಾಡದಿರುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ 54 ಸ್ಥಳಗಳಲ್ಲಿ ಏಕಕಾಲಕ್ಕೆ ಪ್ಲಾಗ್ರನ್ ನಡೆಸಲಾಗುತ್ತಿದೆ ಎಂದರು.
ಇಂತಹ ಕಾರ್ಯಕ್ರಮಗಳು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ವರ್ಷವಿಡೀ ಈ ರೀತಿಯ ಕೆಲಸವಾಗಬೇಕು ಎಂದು ಮೇಯರ್ ಅಭಿಪ್ರಾಯಪಟ್ಟರು.
ಪ್ಲಾಗ್ರನ್ನಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದು, ಪ್ರತಿಯೊಬ್ಬರೂ ತಾವು ಓಡುವ ಪ್ರದೇಶದಲ್ಲಿ ಬಿದ್ದಿರುವ ತ್ಯಾಜ್ಯವನ್ನು ಸಂಗ್ರಹಿಸಿ ಕಸ ವಿಲೇವಾರಿ ಘಟಕಕ್ಕೆ ರವಾನಿಸಲು ತೀರ್ಮಾನಿಸಿದ್ದಾರೆ ಎಂದರು.
ಪ್ಲಾಗ್ ಓಟದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ 12 ಗಂಟೆಗಳಲ್ಲಿ ಅತಿ ಹೆಚ್ಚು ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸುವ ಮೂಲಕ ದಾಖಲೆ ನಿರ್ಮಿಸಲಿದ್ದಾರೆ ಎಂದು ಅವರು ವಿವರಿಸಿದರು.
ಉಪಮೇಯರ್ ರಮಿಳಾ, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಪೆÇಲೀಸ್ ಕಮಿಷನರ್ ಸುನಿಲ್ಕುಮಾರ್ ಮತ್ತಿತರರು ಹಾಜರಿದ್ದರು.