
ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತವಾಗಿ ಹಾಗೂ ಸಮಾಜ ಶಾಂತಿಯುತವಾಗಿದ್ದು ಮುಂದಿನ ದಿನಗಳಲ್ಲಿ ರಾಮರಾಜ್ಯವಾಗಲಿದೆ ಎಂದು ಸಿಎಂ ಕುಮಾರ ಸ್ವಾಮಿ ಭರವಸೆ ವ್ಯಕ್ತ ಪಡಿಸಿದ್ದಾರೆ,
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಗಾಂಧಿಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರ ಸ್ವಾಮಿ, ನಗರದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಅನುಮತಿಯಿಲ್ಲದೆ ಜೂಜಾಟ ನಡೆಸುವುದು ಸೇರಿದಂತೆ ಹಲವು ಸಮಾಜ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ , ಖಾಸಗಿ ಹಾಗೂ ಸರ್ಕಾರಿ ಭೂಮಿಗಳ ಒತ್ತುವರಿ ಸಾಮಾನ್ಯವಾಗಿ ಹೋಗಿದೆ, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಹಿರಿಯ ನಾಗರಿಕರನ್ನು ವಂಚಿಸಲಾಗುತ್ತಿದೆ,. ಸರಗಳ್ಳತನ ಮಿತಿಮೀರಿದೆ ಎಂದು ಹೇಳಿದ್ದಾರೆ,