ಪ್ರತ್ಯೇಕ ಲಿಂಗಾಯಿತ ಧರ್ಮದ ಬಗ್ಗೆ ಕೇಂದ್ರ ಸರ್ಕಾg ಅಂತಿಮ ನಿರ್ಧಾರ

ಬೆಂಗಳೂರು, ಅ.3- ಪ್ರತ್ಯೇಕ ಲಿಂಗಾಯಿತ ಧರ್ಮದ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯಿತ ಧರ್ಮಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ ಎಂದರು.
ಲಿಂಗಾಯಿತ ಧರ್ಮಕ್ಕಾಗಿ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಯುತ್ತಿದ್ದು, ಆ ಹೋರಾಟಕ್ಕೆ ಜಯವಾಗಲಿ ಎಂದು ಆಶಿಸಿದರು.
ಧರ್ಮ ಸೇರಿದಂತೆ ಯಾವುದೇ ಸಮಸ್ಯೆ ಇರಲಿ ಹೆಚ್ಚು ಮಹತ್ವದ ಸಿಗುವುದು ಚುನಾವಣೆ ಸಂದರ್ಭದಲ್ಲೇ ಎಂದ ಅವರು, ಈಗಾಗಲೇ ಲಿಂಗಾಯಿತ ಧರ್ಮಕ್ಕಾಗಿ ಹಲವು ಹೋರಾಟಗಳು ನಡೆದಿವೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ