ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೆಂಪಲ್ ರನ್

ಬೆಂಗಳೂರು, ಅ.3-ಮುಖ್ಯಮಂತ್ರಿ ಕುಮಾರಸ್ವಾಮಿ ಅವರಂತೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೆಂಪಲ್ ರನ್ ಆರಂಭಿಸಿದ್ದು, ತಿರುಪತಿಗೆ ಭೇಟಿ ನೀಡಿ ಶ್ರೀ ವೆಂಕಟೇಶ್ವರಸ್ವಾಮಿ ದರ್ಶನ ಪಡೆದಿದ್ದಾರೆ.
ನಿನ್ನೆ ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿದ ಅವರು, ಇಂದು ಮುಂಜಾನೆ ದೇವರ ದರ್ಶನ ಪಡೆದು, ಸುತ್ತಮುತ್ತಲಿನ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಾಪಸ್ಸಾಗಿದ್ದಾರೆ.
ಕಳೆದ ತಿಂಗಳು ಕಾರವಾರದ ದೇವಸ್ಥಾನವೊಂದಕ್ಕೆ ಭೇಟಿ ನೀಡಿದ್ದರು. ಇದ್ದಕ್ಕಿದ್ದ ಹಾಗೆ ಸರ್ಕಾರಿ ಕಾರ್ಯಕಲಾಪಗಳನ್ನು ಬದಿಗಿರಿಸಿ ದೇವಸ್ಥಾನಕ್ಕೆ ಭೇಟಿ ನೀಡುವ ಪರಿಪಾಠವನ್ನು ಹೆಚ್ಚಾಗಿ ರೂಢಿಸಿಕೊಳ್ಳುತ್ತಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ದಿನದಿಂದ ಸುಮಾರು 60ಕ್ಕೂ ಹೆಚ್ಚು ದೇವಸ್ಥಾನಗಳಿಗೆ ಭೇಟಿ ನೀಡಿರುವುದು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಪರಮೇಶ್ವರ್ ಕೂಡ ಸದ್ದಿಲ್ಲದೆ ಟೆಂಪಲ್ ರನ್ ಆರಂಭಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ