
ನವದೆಹಲಿ: ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಜೆಪಿ ನಡ್ಡಾ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಮೂರು ರಾಜ್ಯಗಳ ಉಸ್ತುವಾರಿಗಳನ್ನಾಗಿ ನೇಮಕಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ಹಿನ್ನಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾದ ಪ್ರಕಾಶ್ ಜಾವಡೇಕರ್ ಅವರನ್ನು ರಾಜಸ್ಥಾನ ವಿಧಾನಸಭಾ ಉಸ್ತುವಾರಿಯನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಿಯುಕ್ತಿಗೊಳಿಸಿದ್ದಾರೆ.
ಇದೇ ವೇಳೆ ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರನ್ನು ತೆಲಂಗಾಣ ವಿಧಾನಸಭಾ ಚುನಾವಣೆಯ ಉಸ್ತುವಾರಿಯಾಗಿ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಉಸ್ತುವಾರಿಯನ್ನಾಗಿ ನಿಯೋಜಿಸಿ ಷಾ ಆದೇಶ ನೀಡಿದ್ದಾರೆ