
ನವದೆಹಲಿ, ಅ.4- ಪೆಟ್ರೋಲ್ ಮತ್ತು ಡೀಸೆಲ್ ದರ ನಿರಂತರವಾಗಿ ಏರುತ್ತಿರುವುದರಿಂದ ತಲೆದೋರಿರುವ ಪರಿಸ್ಥಿತಿ ನಿಭಾಯಿಸುವ ಸಂಬಂಧ ಕೇಂದ್ರ ಪೆಟ್ರೋಲಿಯಂ ಸಚಿವ ದೇವೇಂದ್ರ ಪ್ರಧಾನ್ ಇಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಇಂದು ಮುಂಬೈ, ದೆಹಲಿ, ಕೋಲ್ಕತಾ, ಮತ್ತು ಚೆನೈ ಸೇರಿದಂತೆ ವಿವಿಧ ಮಹಾನಗರಗಳಲ್ಲಿ ಇಂಧನ ಬೆಲೆ ಏರಿಕೆಯಲ್ಲಿ ಸರ್ವಕಾಲಿಕ ದಾಖಲೆಯಾಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 92 ರೂ.ಗಳನ್ನು ತಲುಪಿದೆ.
ಈ ಸಂಬಂಧ ಜೇಟ್ಲಿ ಮತ್ತು ಪ್ರಧಾನ್ ಈ ಸನ್ನಿವೇಶದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.