ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವ ಸೈಕಲ್ ಗಳನ್ನು ಸದ್ಬಳಕೆ ಮಾಡಿಕೊಳ್ಳಿ:ಶಾಸಕ ನಿಸರ್ಗ ನಾರಾಯಣ ಸ್ವಾಮಿ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿತರಿಸುತ್ತಿರುವ ಸೈಕಲ್ ಗಳನ್ನು ಗ್ರಾಮೀಣ ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು ಎಂದು ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕು ತೂಬಗೆರೆ ಸರ್ಕಾರಿ ಶಾಲೆಯ ಆವರಣದಲ್ಲಿ ಶುಕ್ರವಾರ ಪ್ರೌಢಶಾಲಾ 8 ನೇಯ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಬಸ್ ಸೌಕರ್ಯ ಕಡಿಮೆ ಇರುವ ದೃಷ್ಟಿಯಿಂದ ಮಕ್ಕಳು ಶಾಲೆಗೆ ಸಮಯಕ್ಕೆ ಬರಲು ಸೈಕಲ್ ವಿತರಿಸಲಾಗುತ್ತಿದೆ, ಹೆಣ್ಣು ಮಕ್ಕಳು ಪ್ರೌಢಶಾಲೆಯ ವಿದ್ಯಾಭ್ಯಾಸ ಕುಂಠಿತವಾಗುತ್ತಿರುವ ದೃಷ್ಟಿಯಿಂದ ಸರ್ಕಾರ ಉಚಿತ ಸೈಕಲ್ ವಿತರಣೆ ಮಾಡಲಾಗುತ್ತಿದೆ, ಇದನ್ನು ಬಳಸಿಕೊಂಡು ಮಕ್ಕಳು ವಿದ್ಯಾಭ್ಯಾಸ ಮುಂದುವರೆಸಿದರೆ ಸರ್ಕಾರದ ಯೋಜನೆಗೆ ತಕ್ಕ ಫಲ ಸಿಗುತ್ತದೆ, 8ನೇ ತರಗತಿ ವಿದ್ಯಾರ್ಥಿಗಳಿ ನೀಡಿದ ಸೈಕಲ್ ಅನ್ನು ಬೇರೆ ಯಾರೂ ಬಳಸಿ ಹಾಳೂ ಮಾಡದೇ 10 ನೇ ತರಗತಿ ಓದುವವರೆಗೂ ಸೈಕಲ್ ಇಟ್ಟುಕೊಂಡರೆ ಶಾಲೆಗೆ ಬರುವುದಕ್ಕೆ ಮಕ್ಕಳಿಗೆ ಸಹಕಾರಿಯಾಗುತ್ತದೆ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಅಪ್ಪಯ್ಯಣ್ಣ ಮಾತನಾಡಿ ಸರ್ಕಾರ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ಸಮವಸ್ತ್ರ, ಪಠ್ಯ ಪುಸ್ತಕ, ವಿದ್ಯಾರ್ಥಿ ವೇತನ, ಬಿಸಿಯೂಟ, ಕ್ಷೀರಭಾಗ್ಯ, ಇನ್ನೂ ಮುಂತಾದ ಸೌಲಭ್ಯಗಳನ್ನು ನೀಡುತ್ತಿದೆ, ಇದನ್ನು ಬಳಸಿಕೊಂಡು ಸರ್ಕಾರಿ ಶಾಲೆ ಎಂದು ನಿರ್ಲಕ್ಷ್ಯ ತೋರದೇ ಮಕ್ಕಳು ವಿದ್ಯಾಭ್ಯಾಸ ಕಲಿಯಬೇಕು ಎಂದು ಹೇಳಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯ್ತಿ ಸದಸ್ಯ ಸುನೀಲ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮುನಿಅಕ್ಕಯಮ್ಮ, ಗ್ರಾಮ ಪಂಚಾಯ್ತಿ ಸದಸ್ಯ ಟಿ.ವಿ.ವೆಂಕಟೇಶ್, ವೆಂಕಟೇಗೌಡ, ದೇವೆಂದ್ರಸ್ವಾಮಿ, ಸುಬ್ರಹ್ಮಣ್ಯ,ಮಂಜುನಾಥ್, ನಂಜೇಗೌಡ, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಇನಾಂದರ್, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ರಾಮಕೃಷ್ಣಪ್ಪ, ಗಂಗಧಾರಯ್ಯ, ಜೆಡಿಎಸ್ ಮುಂಖಡ ಕನಕದಾಸ್, ಮುಖ್ಯ ಶಿಕ್ಷಕ ಗೀರಿಶ್, ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ