ಬಿಬಿಎಂಪಿ ಉಪ ಮೇಯರ್ ರಮೀಳಾ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಹೃದಯಾಘಾತದಿಂದ ಬಿಬಿಎಂಪಿ ಉಪಮೇಯರ್ ರಮೀಳಾ ಉಮಾಶಂಕರ್ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ರಮೀಳಾ ಅವರ ಸಾವಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ” ಬಿಬಿಎಂಪಿ ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ನಿನ್ನೆಯಷ್ಟೆ ‘ನಮ್ಮ ಮೆಟ್ರೋ’ ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಭಾವಹಿಸಿದ್ದರು. ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಗ ದುಃಖವನ್ನು ಭರಿಸುವ ಸ್ಥೈರ್ಯ ಅವರ ಕುಟುಂಬಕ್ಕೆ ಸಿಗಲಿ” ಎಂದು ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.

ಉಪ ಮಹಾಪೌರರಾದ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲಾ ಮಹಿಳೆ ಅವರು. ಉಪ ಮಹಾಪೌರರಾದ ಕೇವಲ ಒಂದೇ ವಾರದಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಕೆಲಸ ಮಾಡಲು ಪ್ರಾರಂಭಿಸಿದ್ದರು. ಈ ದಿನ ಅವರ ಅಗಲಿಕೆಯಿಂದ ನಮ್ಮ ಪಕ್ಷಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ. ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮಾಜಿ ಪ್ರಧಾನಿ ಎಚ್‍ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ.

ರಮೀಳಾ ಅವರಿಗೆ ತಡರಾತ್ರಿ ರಾತ್ರಿ ಹೃದಯಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ತಡರಾತ್ರಿ 12.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಉಪಮೇಯರ್ ರಮೀಳಾ ಅವರು ಮಧುಮೇಹ ಹಾಗೂ ಅಸ್ತಮಾದಿಂದ ಬಳಲುತ್ತಿದ್ದರು. ರಮೀಳಾ ಅವರು ಚುನಾವಣೆಗೂ ಮೊದಲು ಹಾಗೂ ನಂತರವೂ ಸಾಕಷ್ಟು ಒತ್ತಡದಲ್ಲಿದ್ದರು. ಗುರುವಾರ ಕೂಡ ಕೆಲಸದ ಒತ್ತಡ ಇದ್ದ ಕಾರಣ ಸಮಯಕ್ಕೆ ಸರಿಯಾಗಿ ಮಾತ್ರೆ ತೆಗೆದುಕೊಂಡಿರಲಿಲ್ಲ. ಹೀಗಾಗಿ ಹೃದಯಾಘಾತವಾಗಿದೆ ಎಂದು ಅವರ ಆಪ್ತ ವಲಯಗಳಿಂದ ತಿಳಿದುಬಂದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ