ಕೇಂದ್ರ ತಂಡದ ವರದಿಯನ್ನಾಧರಿಸಿ ಪರಿಹಾರ ನೀಡಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮನವಿ

ನವದೆಹಲಿ,ಅ.5- ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧ್ಯಯನ ಮಾಡಿರುವ ಕೇಂದ್ರ ತಂಡದ ವರದಿಯನ್ನಾಧರಿಸಿ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡುಗು ಸೇರಿದಂತೆ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಂತೆ ರಾಜ್ಯ ಮಾಡಿದ ಮನವಿ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೇಂದ್ರ ಅಧ್ಯಯನ ತಂಡವನ್ನು ರಾಜ್ಯಕ್ಕೆ ಕಳುಹಿಸಿತ್ತು.

ಕೊಡಗು, ಹಾಸನ, ಉಡುಪಿ ಸೇರಿದಂತೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ತಂಡ ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆ ವರದಿ ಆಧರಿಸಿ ಪರಿಹಾರ ಧನ ನೀಡುವಂತೆ ಗೃಹ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ಮನವಿ ಮಾಡಿರುವುದಾಗಿ ಗೌಡರು ತಿಳಿಸಿದರು.
ಕೊಡುಗು ಸೇರಿದಂತೆ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಕೋರುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯ ಕೋರಲಾಗಿತ್ತು. ಆದರೆ ರಷ್ಯಾಧ್ಯಕ್ಷರ ಭೇಟಿಯ ಹಿನ್ನೆಲೆಯಲ್ಲಿ ನಮಗೆ ಪ್ರಧಾನಿ ಭೇಟಿ ಸಾಧ್ಯವಾಗಲಿಲ್ಲದರು.
ಪ್ರಧಾನಿಯವರ ಸೂಚನೆಯಂತೆ ಕೇಂದ್ರ ಗೃಹ ಸಚಿವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ತಾವು ಭೇಟಿ ಮಾಡಿ ನೆರವಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ