ತಮಿಳುನಾಡಿನಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾಧ್ಯಂತ ಭಾರಿ ಮಳೆಯಾಗುತ್ತಿದ್ದು, ಚೆನ್ನೈ, ಕಾಂಚಿಪುರಂ ಮತ್ತು ತಿರುವಳ್ಳುವರ್‌ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು ಮತ್ತು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಎರಡು ರಾಜ್ಯಗಳಲ್ಲಿ ಅಕ್ಟೋಬರ್‌ 7 ರಂದು ಹವಾಮಾನ ವೈಪರೀತ್ಯ ಉಂಟಾಗಲಿದ್ದು, ವಿಪತ್ತು ನಿರ್ವಹಣ ಮಂಡಳಿ ಮತ್ತು ರಕ್ಷಣಾ ಅಧಿಕಾರಿಗಳು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅ. 7 ರಂದು ಭಾರಿ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಮಳೆಯಿಂದ ಹೆಚ್ಚಿನ ಪ್ರಮಾಣದ ಹಾನಿಗೆ ತುತ್ತಾಗುವ ಪ್ರದೇಶಗಳಲ್ಲಿ ಎಚ್ಚರಿಕೆ ಕೈಗೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ