
ಬೆಂಗಳೂರು,ಅ.5-ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಇಂದು ಮುಂಜಾನೆ ನಂದಿನಿಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಲ್ಪನಾ (27) ಕೊಲೆಯಾದ ಮಹಿಳೆ. ಆಕೆಯ ಪತಿಯೇ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ನಂದಿನಿ ಲೇಔಟ್ ಠಾಣೆ ಪೆÇಲೀಸರು ಶಂಕಿಸಿ ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಮೂಲತಃ ಆಂಧ್ರಪ್ರದೇಶದವರಾದ ಕಲ್ಪನಾ ಮತ್ತು ಆಕೆಯ ಪತಿ ರಮೇಶ ಲಗ್ಗೆರೆಯ ಲಕ್ಷ್ಮಿದೇವಿ ನಗರದಲ್ಲಿ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಇಬ್ಬರು ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು.
ಕಳೆದ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದ ಈ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಇಂದು ಮುಂಜಾನೆ ಸಹ ಪತಿ-ಪತ್ನಿ ನಡುವೆ ಜಗಳವಾಗಿದೆ. ಜಗಳದ ಸದ್ದು ಕೇಳಿಸುತ್ತಿತ್ತೆಂದು ಅಕ್ಕಪಕ್ಕದ ನಿವಾಸಿಗಳು ತಿಳಿಸಿದ್ದಾರೆ.
ಬೆಳಗ್ಗೆ ಕಲ್ಪನಾಳ ತಾಯಿ ಮಗಳ ಮನೆಗೆ ಬಂದು ನೋಡಿದಾಗ ಆಕೆ ಕೊಲೆಯಾಗಿರುವುದು ಗೊತ್ತಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ತಾಯಿ ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.