ಆರ್‏ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ,

ನವದೆಹಲಿ: ರೆಪೋ ದರ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್​ಬಿಐ) ಶುಕ್ರವಾರ ನಿರ್ಧರಿಸಿದೆ.
ರೆಪೋ ದರಗಳನ್ನು ಶೇ. 6.50ರ ದರದಲ್ಲಿ ಮತ್ತು ರಿವರ್ಸ್ ರೆಪೋ ದರವನ್ನು ಶೇ.6.25ರ ದರದಲ್ಲಿಯೇ ಮುಂದುವರೆಸಲು ಆರ್​ಬಿಐ ತೀರ್ಮಾನಿಸಿದೆ.
ಈ ಹಿಂದೆ ರೆಪೋ ಮತ್ತು ರಿವರ್ಸ್ ರೆಪೋ ದರವನ್ನು ಎರಡು ಬಾರಿ ಏರಿಸಿದ್ದ ಆರ್ ಬಿಐ ಈ ಬಾರಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದು ಕೊಂಡಿದೆ.
ರುಪಾಯಿ ಮೌಲ್ಯ ಕುಸಿತ ಹಾಗೂ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಆರ್ ಬಿಐ ರೆಪೋ ದರವನ್ನು ಶೇ.  25 ಮೂಲಾಂಶಗಳಷ್ಟು ಏರಿಕೆ ಮಾಡುವ ನಿರೀಕ್ಷೆ ಇತ್ತು. ಆದರೆ ಮಾರುಕಟ್ಟೆ ಸ್ಥಿರತೆಗಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಆರ್ ಬಿಐ ಹೇಳಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ