ಆಯುಷ್ಮಾನ್ ಭಾರತ್ ಯೋಜನೆ: ಅರ್ಹ ಫಲಾನುಭವಿಗಳನ್ನು ಗುರ್ತಿಸುವಂತೆ ರಾಜ್ಯ ಸರ್ಕಾರಗಳಿಗೆ ಸುತ್ತೋಲೆ

ನವದೆಹಲಿ: ಆಯುಷ್ಮಾನ್ ಭಾರತ್ ಯೋಜನೆ ಯ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರ್ತಿಸುವಂತೆ ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯೊಂದರನ್ನು ಹೊರಡಿಸಿದೆ.

ದೇಶದ ಬಡ ಜನರಿಗಾಗಿ ಈ ಯೋಜನೆ ಜಾರಿಗೆ ತರಲಾಗಿದ್ದು, ಕೆಲವರು ಈ ಯೋಜನೆ ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಈ ಹಿನ್ನಲೆಯಲ್ಲಿ ರಾಷ್ಟ್ರೀ ಆರೋಗ್ಯ ಪ್ರಾಧಿಕಾರ ಇದೀಗ ಎಲ್ಲಾ ರಾಜ್ಯಸರ್ಕಾರಗಳಿಗೂ ಸುತ್ತೋಲೆ ಹೊರಡಿಸಿದ್ದು, ಅರ್ಹ ಫಲಾನುಭವಿಗಳನ್ನು ಗುರ್ತಿಸುವಂತೆ ಸೂಚನೆ ನೀಡಿದೆ.

ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ (ಎಸ್ಇಸಿಸಿ)ಯಲ್ಲಿ ಕೆಲ ಷರತ್ತುಗಳನ್ನು ವಿಧಿಸಿ ಈ ಮೂಲಕ ಯೋಜನೆಗೆ ಅರ್ಹ ಫಲಾನುಭವಿಗಳನ್ನು ಗುರ್ತಿಸುವಂತೆ ಅಧಿಕಾರಿಗಳಿಗೆ ಎನ್’ಹೆಚ್ಎ ಸೂಚನೆ ನೀಡಿದೆ. ತಿಂಗಳಿಗೆ ರೂ.10 ಸಾವಿರಕ್ಕೂ ಹೆಚ್ಚು ದುಡಿಯುತ್ತಿರುವವರು, ತೆರಿಗೆ ಪಾವತಿ ಮಾಡುತ್ತಿರುವವರು, ಮೂರು ಅಥವಾ ಅದಕ್ಕೂ ಹೆಚ್ಚು ಕೊಠಿಡಿಗಳನ್ನು ಮನೆಯಲ್ಲಿ ಹೊಂದಿರುವವರು, ಫ್ರಿರ್ಡ್, ಲ್ಯಾಂಡ್ ಲೈನ್ ಫೋನ್ ಗಳನ್ನು ಹೊಂದಿರುವವರು ಯೋಜನೆಯಿಂದ ಹೊರಗಿಡಲಾಗುತ್ತದೆ. ಜನಗಣತಿಯಲ್ಲಿ ಇಷ್ಟೆಲ್ಲಾ ಮಾಹಿತಿಗಳನ್ನು ಕಲೆಹಾಕಿದ್ದರು, ಅರ್ಹತೆಯೇ ಇಲ್ಲದ ಜನರು ಫಲಾನುಭವಿಗಳಾಗಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ