ಚುನಾವಣಾ ಆಯೋಗದ ಸುದ್ದಿಗೋಷ್ಥಿ ಮುಂದೂದಿಕೆ: ಆಯೋಗದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ: ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ ಹಾಗೂ ಛತ್ತೀಸ್‌ಘಡ್ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ದಿನಾಂಕವನ್ನು ಪ್ರಕಟಿಸಲು ಚುನಾವಣಾ ಆಯೋಗ ನಿಗದಿ ಮಾಡಿದ್ದ ಸುದ್ದಿಗೋಷ್ಠಿಯನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಲಾಗಿದೆ.

ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ಆಯೋಜಿಸಿತ್ತು. ಆದರೆ ಸುದ್ದಿಗೋಷ್ಠಿಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ. ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ಮುಂದೂಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದೆ.

ಕೇಂದ್ರ ಚುನಾವಣಾ ಆಯೋಗ ಪ್ರಧಾನಿ ಮೋದಿ ಪರವಾಗಿದೆ. ರಾಜಸ್ಥಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಧಾನಿ ಮೋದಿ ರ್ಯಾಲಿ ಆಯೋಜಿಸಲಾಗಿದ್ದು, ಈ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಮಧ್ಯಾಹ್ನ 12:30ಕ್ಕೆ ನಿಗದಿ ಮಾಡಿದ್ದ ಸುದ್ದಿಗೋಷ್ಠಿಯನ್ನು 3 ಗಂಟೆಗೆ ಮುಂದೂಡಿದೆ. ಆಯೋಗ ಕೇಂದ್ರ ಸರ್ಕಾರದ ಪರ ಕಾರ್ಯನಿರ್ವಹಿಸುತ್ತಿದೆ ಎಂದು ಎಐಸಿಸಿ ವಕ್ತಾರ ರಣ್ ದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ.

ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಯಲಿದ್ದು, ಛತ್ತೀಸ್‌ಘಡದಲ್ಲಿ ಮಾತ್ರ ಎರಡು ಹಂತದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ