ಮೈತ್ರಿಯಾಗಿಯೇ ಚುನಾವಣೆ ಎದುರಿಸುತ್ತೇವೆ: ಹೆಚ್ ಡಿ ದೇವೇಗೌಡ

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಉಪ ಚುನಾವಣೆ ಎದುರಿಸಲಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ತಿಳಿಸಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ರಾಮನಗರ ನಮ್ಮದೇ ಕ್ಷೇತ್ರವಾಗಿತ್ತು ಅಲ್ಲಿ ಅಭ್ಯರ್ಥಿ ಹಾಕುತ್ತೇವೆ. ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕಲಿದೆ ಎಂದರು.

ಶಿವಮೊಗ್ಗ, ಬಳ್ಳಾರಿ, ಮಂಡ್ಯ ಮೂರು ಲೋಕಸಭಾ ಉಪ ಚುನಾವಣೆ ಬಗ್ಗೆ ಕುಮಾರಸ್ವಾಮಿ , ಸಿದ್ದರಾಮಯ್ಯ , ಪರಮೇಶ್ವರ್ ಚರ್ಚೆ ಮಾಡಿ ತೀರ್ಮಾನ ಮಾಡ್ತಾರೆ.

ಯಾವುದೇ ಗೊಂದಲ ಇಲ್ಲ. ಮೈತ್ರಿಯಾಗೇ ಚುನಾವಣೆ ಎದುರಿಸುತ್ತೇವೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಅಭ್ಯರ್ಥಿ ಯಾರು ಅನ್ನೋದು ಇನ್ನೂ ತೀರ್ಮಾನ ಆಗಿಲ್ಲ. ಇನ್ನು ಅನಿತಾಕುಮಾರಸ್ವಾಮಿ ಸ್ಪರ್ಧೆ ಬಗ್ಗೆಯೂ ಇನ್ನೂ ತೀರ್ಮಾನ ಆಗಿಲ್ಲ ಎಂದು ಹೇಳಿದರು.

ಈ ಉಪ ಚುನಾವಣೆಗಳು ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲ. ಚುನಾವಣೆ ಪ್ರಚಾರಕ್ಕೆ ಹೋಗುವ ಬಗ್ಗೆ ತೀರ್ಮಾನ ಮಾಡಿಲ್ಲ, ಅದನ್ನು ಸರ್ಕಾರದ ಮುಖಂಡರೇ ಮಾಡಿಕೊಳ್ತಾರೆ. ಬಿಜಾಪುರ ಸ್ಥಳೀಯ ಸಂಸ್ಥೆ ಗಳ ಚುನಾವಣೆಯಲ್ಲಿ ನಾವು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದ್ದೀವಿ ಎಂದು ಮಾಜಿ ಪ್ರಧಾನಿ ಹೇಳಿದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ