ಪರಿಷತ್ ಸದಸ್ಯರನ್ನಾಗಿ ಮುಖ್ಯಮಂತ್ರಿ ಚಂದ್ರು ನೇಮಕಕ್ಕೆ ಒತ್ತಾಯ

ಬೆಂಗಳೂರು,ಅ.6- ಮುಖ್ಯಮಂತ್ರಿ ಚಂದ್ರು ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನಾಮಕರಣ ಮಾಡಬೇಕೆಂದು ಹಿಂದೂ ಸಾಧರ ಕ್ಷೇಮಾಭಿವೃದ್ದಿ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಸಂಘದ ಅಧ್ಯಕ್ಷ ರವಿಕುಮಾರ್, ನಮ್ಮ ಜನಾಂಗವು ಅತಿ ಚಿಕ್ಕ ಜನಾಂಗವಾಗಿದ್ದು, ಆರ್ಥಿಕ, ಶೈಕ್ಷಣಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ನಮ್ಮ ಜನಾಂಗದವರು ಕೃಷಿ ಕಾರ್ಮಿಕರಾಗಿ ಜೀವನ ಸಾಗಿಸುತ್ತಿದ್ದಾರೆ. ನಮ್ಮ ಸಮಾಜದ ಅಭಿವೃದ್ದಿ ಮತ್ತು ಬೆಳವಣಿಗೆಗಾಗಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಯ್ಕೆ ಮಾಡಬೇಕು. ಇವರು ವಿಧಾನಪರಿಷತ್ ಸದಸ್ಯರಾಗಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ನಮ್ಮ ಸಮಾಜದ ಅಭಿವೃದ್ದಿಗಾಗಿ ವಿಧಾನಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕೆಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ