ಬೈಕ್‍ಗೆ ಟ್ಯಾಂಕರ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು, ಅ.6- ಬೈಕ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ಚಿಕ್ಕಜಾಲ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವೃತ್ತಿಯಲ್ಲಿ ವೆಲ್ಡರ್ ಆಗಿದ್ದ ಹೆಗಡೆನಗರ ನಿವಾಸಿ ಇರ್ಫಾನ್ ಅಹಮ್ಮದ್ (21) ಮೃತಪಟ್ಟ ದುರ್ದೈವಿ.
ಬೆಳಗ್ಗೆ 9 ಗಂಟೆಯಲ್ಲಿ ಇರ್ಫಾನ್ ಬೈಕ್‍ನಲ್ಲಿ ಚಿಕ್ಕಜಾಲ ಸಂಚಾರಿ ಠಾಣೆ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದಿದೆ.
ಹಿಂಬದಿ ಸವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಚಿಕ್ಕಜಾಲ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ