7 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು, ಅ.6- ಅರಣ್ಯ ಇಲಾಖೆಯ 7 ಮಂದಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಹುದ್ದೆಯ ನಿರೀಕ್ಷೆಯಲ್ಲಿದ್ದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ವೀರಣ್ಣ ಅವರನ್ನು ಬೆಂಗಳೂರು ನಗರ ದಕ್ಷಿಣ ಉಪ ವಿಭಾಗದ ಎಸಿಎಫ್ ಹುದ್ದೆ, ಮಂಡ್ಯದ ಸಾಮಾಜಿಕ ಅರಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ನಾಗರಾಜು ಅವರನ್ನು ರಾಮನಗರ ಸಾಮಾಜಿಕ ಅರಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಬಿ.ಬಸವರಾಜಪ್ಪ ಅವರ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

ಹೊಸಪೇಟೆಯ ಸಾಮಾಜಿಕ ಅರಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಂಟೆಪ್ಪಾ ಅವರನ್ನು ಬಳ್ಳಾರಿ ಪ್ರಾದೇಶಿಕ ಅರಣ್ಯ ಉಪ ವಿಭಾಗದಲ್ಲಿ ಖಾಲಿ ಇದ್ದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮಂಗಳೂರು ಸಾಮಾಜಿಕ ಅರಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಹುದ್ದಾರ ಅವರನ್ನು ಬೆಳಗಾವಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯ ಯೋಜನೆ ಹುದ್ದೆಗೆ ಹಾಗೂ ಉತ್ತರ ಕನ್ನಡ ಯಲ್ಲಾಪುರ ತಾಲೂಕು ಕಿರವತ್ತಿ ಸರ್ಕಾರಿ ಮರಮುಟ್ಟಿ ಸಂಗ್ರಹಾಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜು ಜಿ.ವೈ. ಅವರನ್ನು ಕನಕಪುರ ಕಾವೇರಿ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.

ಸುಳ್ಯ ರಬ್ಬರ್ ವಿಭಾಗದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಚ್. ಅಶೋಕ ಅವರನ್ನು ಹಾವೇರಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಹಾಗೂ ಹಾಸನದ ಪ್ರಾದೇಶಿಕ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರೀಶ್ ಕೆ. ಅವರನ್ನು ತುಮಕೂರಿನ ಪ್ರಾದೇಶಿಕ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ