ಕಡಿಮೆಯಾಗದ ಗಾಳಿ, ಮಳೆ ಅಬ್ಬರ ಕರಾವಳಿಯಲ್ಲಿ ರೆಡ್ ಅಲರ್ಟ್: ಜಲಪ್ರಳಯಕ್ಕೆ ತತ್ತರಿಸಿದ ಕೊಡಗಿನಲ್ಲಿ ಮತ್ತೆ ಆತಂಕ

ಮಂಗಳೂರುರಾಜ್ಯದಲ್ಲಿ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆಯಾಗ್ತಿದೆ. ಕರಾವಳಿ ಪ್ರದೇಶದಲ್ಲಿ ಭಾರೀ ಗಾಳಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಸಮುದ್ರತೀರದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳದಲ್ಲಿ ಮಳೆ ಸುರಿಯುತ್ತಿದೆ. ಇನ್ನೂ ಮೂರು ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.
ಅರಬ್ಬೀ ಸಮುದ್ರ ಪ್ರಕ್ಷುಬ್ಧವಾಗುವ ಕಾರಣದಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿರುವ ಬೋಟುಗಳನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ. ಈಗಾಗಲೇ ಸಾವಿರಕ್ಕೂ ಮಿಕ್ಕಿ ಬೋಟುಗಳು ಲಂಗರು ಹಾಕಿದ್ದು, ಇನ್ನಷ್ಟು ಬೋಟುಗಳು ತೀರ ಪ್ರದೇಶಕ್ಕೆ ಆಗಮಿಸುತ್ತಿವೆ.
ಮಳೆಗಾಲದ ಆರಂಭದಲ್ಲಿ ಉತ್ತಮ ವರ್ಷಾಧಾರೆಯಾದ ಕಾರಣಕ್ಕೆ ಮೀನುಗಾರರು ಲಾಭದ ಕನಸು ಕಂಡಿದ್ದರು. ಇದೀಗ ಮೀನುಗಾರರಿಗೂ ಹೊಡೆತ ಬಿದ್ದಿದೆ. ಕೊಡಗು ಜಿಲ್ಲೆಯಲ್ಲೂ ಭಾರೀ ಮಳೆ ನಿರೀಕ್ಷೆ ಇದೆ. ಈಗಾಗಲೇ ಜಲಪ್ರಳಯಕ್ಕೆ ತತ್ತರಿಸಿದ್ದ ಸಂತ್ರಸ್ಥರು ಇದೀತ ಮತ್ತೆ ಆತಂಕದಲ್ಲಿದ್ದಾರೆ.
ಇನ್ನೊಂದೆಡೆ, ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಕರಾವಳಿ ತೀರ ಪ್ರದೇಶಗಳಲ್ಲೂ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಈಗಾಗಲೇ ಭಾರಿ ಗಾಳಿ ಮಳೆಯಾಗುತ್ತಿದ್ದು ಬೋಟ್​ಗಳು ಬಂದರಿನಲ್ಲೇ ಲಂಗರು ಹಾಕಿವೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ