ಮಡಿಕೇರಿ ಜಿ.ಪಂ. ಯೋಜನಾ ನಿರ್ದೇಶಕರಾಗಿ ಕೆ.ಲಕ್ಷ್ಮಿಪ್ರಿಯಾ ನೇಮಕ

Varta Mitra News

ಬೆಂಗಳೂರು, ಅ.6-ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ಮತ್ತೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾದ ಕೆ.ಲಕ್ಷ್ಮಿಪ್ರಿಯಾ ಅವರನ್ನು ಮಡಿಕೇರಿ ಜಿ.ಪಂ. ಯೋಜನಾ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಇದರೊಂದಿಗೆ ಮಡಿಕೇರಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿಯೂ ಅವರು ಕಾರ್ಯ ನಿರ್ವಹಿಸಲಿದ್ದಾರೆ.
ಹುದ್ದೆಗಾಗಿ ಕಾಯುತ್ತಿದ್ದ ಪೂವಿತಾ.ಎಸ್ ಅವರನ್ನು ತಿಪಟೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಹಾಗೂ ಪಾಂಡ್ವೆ ರಾಹುಲ್ ತುಕಾರಾಮ್ ಅವರನ್ನು ಹರಪನಹಳ್ಳಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ಜ್ಞಾನೇಂದ್ರಕುಮಾರ್ ಗಂಗ್ವಾರ್ ಅವರನ್ನು ಬಸವಕಲ್ಯಾಣ ಉಪವಿಭಾಗದ ಸಹಾಯಕ ಆಯುಕ್ತರಾಗಿ ಹಾಗೂ ಹುದ್ದೆಯ ನಿರೀಕ್ಷೆಯಲ್ಲಿದ್ದ ಪ್ರೀತಿ ಗೆಹ್ಲೋಟ್ ಅವರನ್ನು ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ಮಹಮ್ಮದ್ ಇಕ್ರಾಮ್‍ವುಲ್ಲಾ ಶರೀಫ್ ಅವರನ್ನು ಜಮಖಂಡಿ ಉಪವಿಭಾಗದ ಸಹಾಯಕ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ರಾಯಚೂರು ಜಿಲ್ಲಾಧಿಕಾರಿ ಡಾ.ಬಾಗಡಿ ಗೌತಮ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಹಾಗೂ ಹುದ್ದೆಯ ನಿರೀಕ್ಷೆಯಲ್ಲಿದ್ದ ವಸಿರೆಡ್ಡಿ ವಿಜಯ ಜೋತ್ಸ್ನಾ ಅವರನ್ನು ಬೆಂಗಳೂರು ಕೌಶಲ್ಯ ಅಭಿಯಾನದ ಮಿಷನ್ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.
ಐಎಎಸ್ ಅಧಿಕಾರಿ ಶರತ್.ಬಿ ಅವರನ್ನು ರಾಯಚೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿದ್ದು, ಹುದ್ದೆಯ ನಿರೀಕ್ಷೆಯಲ್ಲಿದ್ದ ಸ್ನೇಹಲ್.ಆರ್ ಅವರನ್ನು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ಇಂಡಿ, ಕೊಪ್ಪ ವಿಭಾಗದ ಸಹಾಯಕ ಆಯುಕ್ತ ಡಾ.ರಾಜಾ.ಪಿ ಅವರನ್ನು ಕಲಬುರಗಿ ಜಿ.ಪಂ. ಉಪ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಈ ಹುದ್ದೆಯೊಂದಿಗೆ ಅವರು ಕಲಬುರಗಿ ಜಿ.ಪಂ.ನ ಸಿಇಒ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ.
ಹುದ್ದೆಯ ನಿರೀಕ್ಷೆಯಲ್ಲಿದ್ದ ಡಾ.ಆನಂದ್.ಕೆ ಅವರನ್ನು ಇಂಡಿ ಉಪವಿಭಾಗದ ಸಹಾಯಕ ಆಯುಕ್ತರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ