ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಗೆ ಜಯ: ಸಮೀಕ್ಷಾ ಮರದಿ

ನವದೆಹಲಿ: ಪಂಚ ರಾಜ್ಯಗಳ ಪೈಕಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮೂರೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಜಯ ಗಳಿಸಲಿದ್ದು, ಬಿಜೆಪಿ ಸೋಲನುಭವಿಸಲಿದೆ ಎಂದು ಎಬಿಪಿ ನ್ಯೂಸ್‌ ನಡೆಸಿದ ಜನಮತ ಸಮೀಕ್ಷೆ ತಿಳಿಸಿದೆ.

ಸಮೀಕ್ಷೆ ಪ್ರಕಾರ, ಪ್ರಸ್ತುತ ಬಿಜೆಪಿ ಆಡಳಿತವಿರುವ ರಾಜಸ್ಥಾನದಲ್ಲಿ ಒಟ್ಟು 200 ಸ್ಥಾನಗಳ ಪೈಕಿ 142 ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲಿದೆ. ಬಿಜೆಪಿ ಸಂಖ್ಯಾಬಲ 56 ಸ್ಥಾನಗಳಿಗೆ ಕುಸಿಯಲಿದೆ. ಮತ ಹಂಚಿಕೆಯಲ್ಲೂ ಕಾಂಗ್ರೆಸ್‌ ಶೇ. 50ರಷ್ಟು ಮತಗಳೊಂದಿಗೆ ಮುಂದಿರಲಿದ್ದು, ಬಿಜೆಪಿ ಶೇ. 34ಕ್ಕೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಹೇಳಲಾಗಿದೆ.

230 ಸದಸ್ಯ ಬಲದ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ 122 ಸ್ಥಾನ ಗೆದ್ದು ಸರಳ ಬಹುಮತ ಪಡೆಯಲಿದೆ. ಬಿಜೆಪಿ 108 ಸ್ಥಾನಗಳನ್ನಷ್ಟೇ ಪಡೆಯಲಿದೆ. ರಾಜ್ಯದಲ್ಲಿ ಮತಹಂಚಿಕೆ ಪ್ರಮಾಣದಲ್ಲಿ ಎರಡೂ ಪಕ್ಷಗಳ ನಡುವೆ ಶೆ. 0.7ರಷ್ಟು ಮಾತ್ರ ವ್ಯತ್ಯಾಸವಿರಲಿದೆ ಎಂದು ಹೇಳಲಾಗಿದೆ.

ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 47 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿಯಲಿದೆ. ಬಿಜೆಪಿ ಗೆಲುವು 40 ಕ್ಷೇತ್ರಗಳಿಗೆ ಸೀಮಿತವಾಗಲಿದೆ. ಇಲ್ಲೂ ಸಹ ಕಾಂಗ್ರೆಸ್‌-ಬಿಜೆಪಿ ನಡುವೆ ಮತ ಹಂಚಿಕೆ ಕೇವಲ ಶೇ. 0.3ರಷ್ಟು ಮಾತ್ರ ವ್ಯತ್ಯಾಸವಾಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ