ಸಂಪುಟ ವಿಸ್ತರಣೆ ಮುಂದೂಡಿಕೆ: ಶಾಸಕ ಬಿ.ಸಿ ಪಾಟೀಲ್ ಆಕ್ರೋಶ

ಬೆಂಗಳೂರು: ಸಂಪುಟ ವಿಸ್ತರಣೆ ಮುಂದೂಡೂವ ಮೂಲಕ ಪ್ರಜಾಪ್ರಭುತ್ವವನ್ನೇ ಹತ್ಯೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ ಸಿ ಪಾಟೀಲ್ ತೀವ್ರ ಸಮಾಧಾನ ಹೊರಹಾಕಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಒಂದಲ್ಲ ಒಂದು ಕಾರಣಕ್ಕೆ ಮುಂದೂಡಲಾಗುತ್ತಿದ್ದು, ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಸಚಿವಾಕಾಂಕ್ಷಿಗಳು ಮತ್ತು ಶಾಸಕರ ಆಕ್ರೋಶಕ್ಕೂ ಕಾರಣವಾಗಿದೆ. ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್​ ಅವರು ಸಂಪುಟ ವಿಸ್ತರಣೆ ಮುಂದೂಡಿಕೆ ಕುರಿತು ಟ್ವೀಟ್​ ಮಾಡಿದ್ದಾರೆ. ಸಂಪುಟ ವಿಸ್ತರಣೆಯನ್ನು ವಿಳಂಬ ಮಾಡುವ ಮೂಲಕ ಶಾಸಕರನ್ನು ಅವಮಾನಿಸಲಾಗುತ್ತಿದೆ, ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲಾಗುತ್ತಿದೆ ಮತ್ತು ಪಕ್ಷದ ಹೆಸರಿನಲ್ಲಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್​ ಮುಂದೆ ಮಂಡಿಯೂರಿ, ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿದೆ ಎಂದು ಬಿ.ಸಿ. ಪಾಟೀಲ್​ ಈ ಹಿಂದೆ ಕಾಂಗ್ರೆಸ್​ ಪಕ್ಷದ ಧೋರಣೆಯನ್ನು ಟೀಕಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ