ತುರ್ತು ಅವಶ್ಯಕತೆ ಇರುವವರಿಗೆ ರಕ್ತದಾನದಿಂದ ಜೀವ ಉಳಿಸಿ: ಡಾ.ಎಂ.ಮುರಳೀಧರರಾವ್

ಬೆಂಗಳೂರು, ಅ.7- ಅಪಘಾತ ಹಾಗೂ ಇನ್ನಿತರ ಸಂದರ್ಭಗಳಲ್ಲಿ ತುರ್ತು ಅವಶ್ಯಕತೆ ಇರುವವರಿಗೆ ರಕ್ತದಾನದಿಂದ ಜೀವ ಉಳಿಸುವ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಡಾನ್ ಬಾಸ್ಕೊ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಮುರಳೀಧರರಾವ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮೈಸೂರು-ಬೆಂಗಳೂರು ಮುಖ್ಯರಸ್ತೆಯ ಕುಂಬಳಗೂಡು ಡಾನ್ ಬಾಸ್ಕೊ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶ್ರೇಷ್ಠ ದಾನಗಳಲ್ಲಿ ರಕ್ತದಾನವೂ ಒಂದು. ಒಬ್ಬರು ರಕ್ತದಾನ ಮಾಡಿದರೆ ಮೂರು ಅಮೂಲ್ಯ ಜೀವಗಳನ್ನು ಉಳಿಸಬಹುದಾಗಿದ್ದು, ಯುವ ಸಮೂಹ ಇಂತಹ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು.

ವಿಜಯನಗರ ಲಯನ್ಸ್ ಕ್ಲಬ್ ಡಿಸ್ಟ್ರಿಕ್ಟ್ 370ಈ ಅಧ್ಯಕ್ಷ ಬಿ.ವಿ.ರಾಮಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಶಿಬಿರದಲ್ಲಿ ಪಾಲ್ಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಇದೇ ವೇಳೆ 322ಕ್ಕೂ ಹೆಚ್ಚು ಯೂನಿಟ್ ರಕ್ತವನ್ನು ವಿದ್ಯಾರ್ಥಿಗಳಿಂದ ಸಂಗ್ರಹಿಸಲಾಯಿತು.
ದೈಹಿಕ ಶಿಕ್ಷಕ ನಿರ್ದೇಶಕ ಡಾ.ಕುಮಾರಸ್ವಾಮಿ, ಗ್ರಂಥಾಲಯದ ಮುಖ್ಯಸ್ಥ ಸೋಮರಾಯತಲ್ಲಹಳ್ಳಿ, ಡಾನ್ ಬಾಸ್ಕೊ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ಪೆÇ್ರ.ಮಲ್ಲಿಕಾರ್ಜುನಸ್ವಾಮಿ, ಟೆಲಿಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ಡಾ.ರಂಗಪ್ರಭು, ರೀಡರ್ಸ್ ಫೆÇೀರಂನ ಪವನ್ ಗೌಡ, ಲಯನ್ಸ್ ಕ್ಲಬ್‍ನ ಎನ್.ಎಮ್.ರವಿ, ಗಂಗಾಧರರಾವ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ