ಬೆಂಗಳೂರು,ಅ.7-ಹಂಪ ನಾಗರಾಜಯ್ಯ ಅವರು ಬದುಕಿನ ಎಲ್ಲಾ ಶ್ರೇಣಿಗಳನ್ನು ಬಹಳ ಸಂತೋಷದಿಂದ ಅನುಭವಿಸಿಕೊಂಡು ಬಂದಿದ್ದಾರೆ. ಸಾಹಿತ್ಯದ ಮೂಲಕ ಕನ್ನಡ ನಾಡಿನಲ್ಲಿ ಹೆಸರು ಮಾಡಿದ್ದಾರೆ ಎಂದು ಹಿರಿಯ ಸಾಹಿತಿ ಮತ್ತು ವಿಮರ್ಶಕ ಪೆÇ್ರ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.
ನಗರದ ನ್ಯಾಷನಲ್ ಕಾಲೇಜಿನ ಡಾ.ಎಚ್.ಎನ್.ಸಭಾಂಗಣದಲ್ಲಿ ಕನ್ನಡ ಜನಶಕ್ತಿ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ನಾಡೋಜ ಪೆÇ್ರ. ಹಂಪ ನಾಗರಾಜಯ್ಯ ಅವರ 83ನೇ ಅಂತಾರಾಷ್ಟ್ರೀಯ ಶುಭಾಶಯ ಸಮಾರಂಭ ಮತ್ತು ಅವರ ಗಿಫ್ಟ್ ಆಫ್ ನಾಲೆಡ್ಜ್ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಂಪಾ ನಾಗರಾಜಯ್ಯ ಅವರು 75 ಕನ್ನಡ ಕೃತಿಗಳು, 25 ಇಂಗ್ಲೀಷ್ ಕೃತಿಗಳು ಸೇರಿದಂತೆ 100ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಇವರ ಸಹಪಾಟಿಗಳು ಎಲ್ಲರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳಾಗಿದ್ದಾರೆ ಎಂದರು.
ಮನಸ್ಸಿಗೆ ವಯಸ್ಸಿನ ಹಂಗಿಲ್ಲ ಎಂದು ಇದೇ ವೇಳೆ ಬಾಲಸುಬ್ರಹ್ಮಣ್ಯ ನುಡಿದರು.