ಸಮಾಜದಲ್ಲಿ ಮಾನವೀಯತೆ ಕಡಿಮೆಯಾಗುತ್ತಿದೆ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಕಳವಳ

ಬೆಂಗಳೂರು, ಅ.7-ಪ್ರಜಾಪ್ರಭುತ್ವದ ನೈತಿಕ ಮೌಲ್ಯ ಕುಸಿಯುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಭಿಪ್ರಾಯಪಟ್ಟರು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಒಕ್ಕೂಟ ಹಾಗೂ ಬೆಂಗಳೂರು ನಗರ ಐಎನ್‍ಟಿಯುಸಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಮಾನವೀಯತೆಯೂ ಕಡಿಮೆಯಾಗುತ್ತಿದೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಬರುತ್ತಿಲ್ಲ. ಎಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಪ್ರಧಾನಿ ಮೋದಿಯವರು ವಿದೇಶದಲ್ಲಿರುವ ಕಪ್ಪು ಹಣ ತರುತ್ತೇವೆ ಎಂದು ಹೇಳಿದ್ದರು. ಆ ಭರವಸೆ ಇದುವರೆಗೂ ಈಡೇರಿಲ್ಲ ಎಂದರು.
ಕಾರ್ಮಿಕರ ಕಲ್ಯಾಣಕ್ಕಾಗಿ ಇರುವ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಇದಕ್ಕಾಗಿ ಸಂಘಟನೆಯಾಗಿ ತಮ್ಮ ಹಕ್ಕುಗಳನ್ನು ಪಡೆಯಬೇಕು ಎಂದು ಸಲಹೆ ಮಾಡಿದರು.
ಐಎನ್‍ಟಿಯುಸಿ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ