ಸಚಿವ ಡಿ.ಕೆ. ಶಿವಕುಮಾರ್ ಗೆ ವಿರುದ್ಧ ಮತ್ತೊಂದು ಎಫ್​ಐಆರ್​​!

ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್​ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅಧಿಕಾರಿ ನೀಡಿದ ದೂರಿನನ್ವಯ ಸಚಿವರ ವಿರುದ್ಧ ಪೊಲೀಸರು ಪ್ರಕರಣ​ ದಾಖಲು ಮಾಡಿಕೊಂಡಿದ್ದಾರೆ.

ಅನಧಿಕೃತ ಜಾಹೀರಾತು ಫಲಕ ಅಳವಡಿಸಿದಕ್ಕಾಗಿ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್​ ರಾಜ್ಯ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್​ ವಿರುದ್ಧ ದೂರು ನೀಡಿದ್ದಾರೆ.

ಅನಧಿಕೃತ ಜಾಹೀರಾತು ಫಲಕ ಪ್ರದರ್ಶಿಸಿದಕ್ಕೆ ಡಿಕೆಶಿ ವಿರುದ್ಧ ಬಿಬಿಎಂಪಿ ಅಧಿಕಾರಿ ದೂರು ನೀಡಿದ್ದಾರೆ. ಅನಧಿಕೃತ ಜಾಹೀರಾತು ಫಲಕಗಳನ್ನು ನಿಷೇಧಿಸಿದ್ದ ಹೈಕೋರ್ಟ್, ಬಳಿಕ ನ್ಯಾಯಾಲಯದ ಸೂಚನೆಯಂತೆ ನಗರದಾದ್ಯಂತ ಅನಧಿಕೃತ ಜಾಹೀರಾತು ತೆರವುಗೊಳಿಸಲು ಬಿಬಿಎಂಪಿ ಮುಂದಾಗಿತ್ತು. ಆದರೆ ಮೈಸೂರು ರಸ್ತೆಯ ಪಂತರಪಾಳ್ಯದ ಡಿಕೆಶಿ ಮಾಲೀಕತ್ವದ ಜಾಗದಲ್ಲಿ ಜಾಹೀರಾತು ಫಲಕವನ್ನು ಹಾಕಲಾಗಿತ್ತು. ಹಾಗಾಗಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಡಿಕೆಶಿಗೆ ಬಿಬಿಎಂಪಿ ನೋಟಿಸ್​ ನೀಡಿತ್ತು. ಆದರೆ ಈ ವಿಷಯವನ್ನು ಡಿಕೆಶಿ ಗಣನೆಗೆ ತೆಗೆದುಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕಾರಿ ಮುತ್ತುರಾಜ್​ ಬ್ಯಾಟರಾಯನಪುರ ಠಾಣೆಗೆ ದೂರು ನೀಡಿದ್ದಾರೆ. ಇದೀಗ ಎಫ್​ಐಆರ್​ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ