ವಸತಿ ಯೋಜನೆಯಡಿ 156.36 ಕೋಟಿ ರೂ. ಬಿಡುಗಡೆ

ಬೆಂಗಳೂರು,ಅ.8-ಬಸವ ವಸತಿ ಯೋಜನೆಯ ಸಾಮಾನ್ಯ ಯೋಜನೆ ಹಾಗೂ ವಾಜಪೇಯಿನಗರ ವಸತಿ ಯೋಜನೆಯಡಿ 156.36 ಕೋಟಿ ರೂ. ಬಿಡುಗಡೆ ಮಾಡಿ ವಸತಿ ಇಲಾಖೆ ಆದೇಶ ಹೊರಡಿಸಿದೆ.

ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದ ಮೂಲಕ ಈ ಎರಡು ಯೋಜನೆಗಳನ್ನು ಅನುಷ್ಠಾನ ಗೊಳಿಸಲಾಗತ್ತಿದೆ. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ 705.47 ಕೋಟಿ ರೂ. ಅನುದಾನವನ್ನು ಒದಗಿಸಲಾಗಿತ್ತು.

ಈಗಾಗಲೇ ಪ್ರಥಮ ತ್ರೈಮಾಸಿಕ ಕಂತಿನಲ್ಲಿ 196.36 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು. ಎರಡನೇ ತ್ರೈಮಾಸಿಕ ಕಂತಿನಲ್ಲಿ ಬಸವ ವಸತಿ ಯೋಜನೆಗೆ 93.86 ಕೋಟಿ ರೂ. ಹಾಗೂ ವಾಜಪೇಯಿ ನಗರ ವಸತಿ ಯೋಜನೆಗೆ 62.50 ಕೋಟಿ ರೂ.ಗಳನ್ನು ರಾಜೀವ್‍ಗಾಂಧಿ ವಸತಿ ನಿಗಮಕ್ಕೆ ಬಿಡುಗಡೆ ಮಾಡಲಾಗಿದೆ.

ಬಿಡುಗಡೆ ಮಾಡಲಾದ ಅನುದಾನವನ್ನು ಯಾವ ಉದ್ದೇಶಕ್ಕೆ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಬೇಕು. ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಬೇಕು, ಪಾರದರ್ಶಕತೆ ಅಧಿನಿಯಮದ ನಿಯಮಗಳನ್ನುಕಡ್ಡಾಯವಾಗಿ ಪಾಲಿಸಬೇಕು ಎಂಬ ಷರತ್ತುಗಳನ್ನು ವಸತಿ ಇಲಾಖೆ ವಿಧಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ