ಪುಟ್ಟ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ: ಆರೋಪಿ ಪೊಲೀಸ್ ಬಲೆಗೆ

ಬೆಂಗಳೂರು: ಅ-9: ನಾಲ್ಕು ವರ್ಷದ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ವೆಸಗಿರುವ ಘೋರ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ. ಸಧ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆ ಎದುರು ಆಟವಾಡುತ್ತಿದ್ದ 4 ವರ್ಷದ ಬಾಲಕಿನ್ನು ಕಿಡ್ನಾಪ್​ ಮಾಡಿದ್ದ ಕೂಲಿ ಕಾರ್ಮಿಕ ಚಂದ್ರಬಾಬು (45 ), ಬಳಿಕ ಬಾಲಕಿಯನ್ನು ತನ್ನ ಶೆಡ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ನಂತರ ಆ ಮಗುವನ್ನು ಅದರ ಮನೆಯ ಬಳಿಯೇ ಬಿಟ್ಟು ಹೋಗಿದ್ದ. ಬಾಲಕಿ ಅಳುತ್ತ ನಡೆದ ವಿಷಯವನ್ನು ತಾಯಿಗೆ ತಿಳಿಸಿದ್ದಾಳೆ.

ವಿಷಯ ತಿಳಿದ ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರವಾಗಿರುವುದು ಸಾಬೀತಾಗಿದೆ. ಆರೋಪಿ ವಿರುದ್ಧ ಮಾರತ್​ಹಳ್ಳಿ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ