
ಬೆಂಗಳೂರು, ಅ.9- ಅತ್ಯಂತ ಕಡಿಮೆ ಅವಧಿ ಇರುವ ಲೋಕಸಭೆಗೂ ಉಪ ಚುನಾವಣೆ ಘೋಷಣೆ ಮಾಡಿರುವುದಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂವರು ಸಂಸದರು ವಿಧಾನಸಭೆಗೆ ಆಯ್ಕೆಯಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ರೀತಿ ನೆರೆಯ ಆಂಧ್ರ ಪ್ರದೇಶದಲ್ಲೂ ರಾಜೀನಾಮೆ ಕೊಡಲಾಗಿದೆ. ಆದರೆ, ಆಂಧ್ರಪ್ರದೇಶದಲ್ಲಿ ಚುನಾವಣೆ ಘೋಷಣೆಯಾಗಿಲ್ಲ. ಕರ್ನಾಟಕದ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತಿದೆ. ಅಕ್ಕ ಪಕ್ಕದ ರಾಜ್ಯಗಳಲ್ಲಿ ಈ ರೀತಿಯ ಕಾನೂನಿನ ತಾರತಮ್ಯ ಇರಲು ಸಾಧ್ಯವೇ ಎಂಬುದನ್ನು ಚುನಾವಣಾ ಆಯೋಗವೇ ಹೇಳಬೇಕು ಎಂದರು.
ಅದೇನೇ ಇದ್ದರು ನಾವು ಚುನಾವಣೆಗೆ ಸಿದ್ದರಾಗಿದ್ದೇವೆ. ಇಂದಿನ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದರು.