ಜೆಡಿಎಸ್‍ನೊಂದಿಗಿನ ಮೈತ್ರಿ ಮಂಡ್ಯ ಸ್ಥಳೀಯ ಕಾಂಗ್ರೆಸ್ ನಾಯಕರ ವಿರೋಧ

ಬೆಂಗಳೂರು, ಅ.13-ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗಳ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿನ ಗೊಂದಲ ಮುಂದುವರೆದಿರುವ ನಡುವೆ ಮಂಡ್ಯದ ಸ್ಥಳೀಯ ಕಾಂಗ್ರೆಸ್ ನಾಯಕರು ಜೆಡಿಎಸ್‍ನೊಂದಿಗಿನ ಮೈತ್ರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್‍ನೊಂದಿಗೆ ಮೈತ್ರಿ ಬೇಡವೇ ಬೇಡ ಎಂದು ಪಟ್ಟು ಹಿಡಿದಿರುವ ನಾಯಕರು ಒಂದು ವೇಳೆ ಚುನಾವಣೆಯಲ್ಲೂ ಮೈತ್ರಿ ಮುಂದುವರೆಸಿದರೆ ಬಿಜೆಪಿಗೆ ಮತ ಹಾಕುವ ಬೆದರಿಕೆ ಹಾಕಿದ್ದಾರೆ.
ಕಾಂಗ್ರೆಸ್‍ನ ಹಿರಿಯ ನಾಯಕರಿಗೆ ಈ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಿರುವ ಸ್ಥಳೀಯ ಕಾಂಗ್ರೆಸ್ಸಿಗರು ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಚುನಾವಣೆಗೆ ಬೆಂಬಲ ನಿರಾಕರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ