ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
62 ವರ್ಷದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಸೆಪ್ಟೆಂಬರ್ 15ರಿಂದಲೂ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ತವರು ರಾಜ್ಯ ಗೋವಾಗೆ ತೆರಳಲು ಪರಿಕ್ಕರ್ ಸದೃಢರಾಗಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ದೃಢಪಡಿಸಿದ್ದಾರೆ. ಗೋವಾಗೆ ಹಿಂತಿರುಗಿದ ಬಳಿಕ ಪರಿಕ್ಕರ್ ಅವರು ಪಣಜಿಯಲ್ಲಿರುವ ಅವರ ಖಾಸಗಿ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.






