ಭಾರತದ ಒಂದು ಸರ್ಜಿಕಲ್ ಸ್ಟ್ರೈಕ್ ಗೆ ನಮ್ಮಿಂದ ಹತ್ತು ಸರ್ಜಿಕಲ್ ಸ್ಟ್ರೈಕ್ ಎದುರಿಸಬೇಕಾಗುತ್ತೆ: ಪಾಕ್ ಎಚ್ಚರಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ಒಂದೇ ಒಂದು ಸರ್ಜಿಕಲ್ ದಾಳಿ ನಡೆಸಿದರೂ ಅದಕ್ಕೆ ಪ್ರತಿಯಾಗಿ ಭಾರತದ ಮೇಲೆ ನಾವು 10 ಸರ್ಜಿಕಲ್ ಸ್ಟ್ರೈಕ್ ಮಾಡುತ್ತೇವೆಂದು ಪಾಕಿಸ್ತಾನ ಎಚ್ಚರಿಕೆ ನೀಡಿದೆ.

ಲಂಡನ್ ನಲ್ಲಿ ಸೇನಾ ಮುಖ್ಯಸ್ಥ ಜ.ಕಮರ್ ಜಾವೇದ್ ಬಾಜ್ವಾ ಅವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೇನಾ ವಕ್ತಾರ ಜ.ಆಸಿಫ್ ಗಫೂರ್, ಭಾರತವೇನಾದರೂ ಮತ್ತೊಮ್ಮೆ ಪಾಕಿಸ್ತಾನದ ಮೇಲೆ ಸರ್ಜಿಕಲ್ ದಾಳಿ ನಡೆಸಿದ್ದೇ ಆದರೆ, ಭಾರತದ ಮೇಲೆ ಅದೇ ರೀತಿಯ 10 ದಾಳಿಗಳನ್ನು ನಡೆಸುವ ಸಾಮರ್ಥ್ಯ ಪಾಕಿಸ್ತಾನಕ್ಕಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಸಾಮರ್ಥ್ಯದ ಬಗ್ಗೆ ಸಂದೇಹ ಪಡಬೇಕಿಲ್ಲ. ಭಾರತ ದುಸ್ಸಾಹಸಕ್ಕೆ ಯತ್ನಿಸಿದರೆ, ಅದಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಜ.ಆಸಿಫ್ ತಿಳಿಸಿದ್ದಾರೆ.

Pakistan Warns,10 Surgical Strikes, If India Carries Out Even One

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ