
ಬೆಂಗಳೂರು, ಅ.14- ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ಜನರು ನಮ್ಮ ಪರವಾಗಿದ್ದಾರೆ ಎಂದು ಮಾಜಿ ಶಾಸಕಿ ಅನಿತಾಕುಮಾರಸ್ವಾಮಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆಯಲ್ಲಿ ಜನ ನಮಗೆ ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಳೆ ಮಧ್ಯಾಹ್ನ ಜೆಡಿಎಸ್ ಅಭ್ಯರ್ಥಿಯಾಗಿ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲಾಗುವುದು. ಬಿಜೆಪಿಯಿಂದ ಯಾರು ಬೇಕಾದರೂ ಅಭ್ಯರ್ಥಿಯಾಗಲಿ. ಅದರ ಬಗ್ಗೆ ಚಿಂತೆಯಿಲ್ಲ ಎಂದರು.
ದೇವೇಗೌಡರು ನಾಳೆ ನವದೆಹಲಿಗೆ ತೆರಳುತ್ತಿರುವುದರಿಂದ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರುವುದಿಲ್ಲ. ಆದರೆ, ಪಕ್ಷದ ಎಲ್ಲಾ ಮುಖಂಡರು ಇರುತ್ತಾರೆ ಎಂದು ಅವರು ತಿಳಿಸಿದರು.