ಯಶ್ ಅಭಿಮಾನಿಗಳು ಕಹಿ ಸುದ್ದಿ, ಬಹುನಿರೀಕ್ಷಿತ ‘ಕೆಜಿಎಫ್’ ಬಿಡುಗಡೆ ಮುಂದಕ್ಕೆ, ಕಾರಣ ಏನು ಗೊತ್ತ?

ಬೆಂಗಳೂರು: ಸ್ಯಾಂಡಲ್ವುಡ್ ನ ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಬಿಡುಗಡೆ ಮತ್ತೆ ಮುಂದಕ್ಕೆ ಹೋಗಿದೆ.
ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ಸುದ್ದಿಗೋಷ್ಠಿಯಲ್ಲಿ ಕೆಜಿಎಫ್ ಚಿತ್ರ ನವೆಂಬರ್ ಗೆ ಬದಲು ಡಿಸೆಂಬರ್ 21ರಂದು ದೇಶದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ ಎಂದು ಹೇಳಿದರು.

ಕೆಜಿಎಫ್ ಚಿತ್ರ ಪಂಚ ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ವಿತರಣಾ ಹಕ್ಕನ್ನು ಅನಿಲ್ ತಡಾನಿ, ರಿತೇಶ್ ಸಿದ್ವಾನಿ ಹಾಗೂ ಫರ್ಹಾನ್ ಅಕ್ತರ್ ತೆಗೆದುಕೊಂಡಿದ್ದು ದೇಶಾದ್ಯಂತ ಅದ್ಧೂರಿಯಾಗಿ ತೆರೆ ಕಾಣಲಿದೆ. ಸದ್ಯ ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಡಬ್ಬಿಂಗ್ ಮುಗಿದಿದ್ದು ಇನ್ನು ಹಿಂದಿ ಡಬ್ಬಿಂಗ್ ಬಾಕಿ ಇರುವುದರಿಂದ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ.

ಖ್ಯಾತ ನಿರ್ದೇಶಕ ಎಸ್ಎಸ್ ರಾಜಮೌಳಿ ಬಾಹುಬಲಿ ಎಂಬ ಕಾನ್ಸೆಪ್ಟ್ ಮಾಡಿ ಯಶಸ್ವಿಯಾಗಿದ್ದರು. ರಾಜಮೌಳಿ ಅವರ ಹಾದಿಯನ್ನೇ ಕೆಜಿಎಫ್ ತಂಡ ಸಹ ಅನುಸರಿಸಿದ್ದು ಎಲ್ಲಾ ಭಾಷೆಯಲ್ಲಿ ಬಿಡುಗಡೆ ಮಾಡಿ ಜಗತ್ತಿನಾದ್ಯಂತ ತೆರೆಗೆ ತರೋದಕ್ಕೆ ಫ್ಲಾನ್ ಮಾಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ