ಬೆಂಗಳೂರು, ಅ.14- ಮಂಡ್ಯ ಜಿಲ್ಲೆ ಜೆಡಿಎಸ್ನಲ್ಲಿ ಯಾವುದೇ ಅಸಮಾಧಾನ ಇಲ್ಲ. ಸರ್ವಸಮ್ಮತ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಸುದ್ದಿಗಾರರಿಗೆ ತಿಳಿಸಿದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿದ್ದು, ಸರ್ವಾನುಮತದಿಂದ ಶಿವರಾಮೇಗೌಡರನ್ನು ಆಯ್ಕೆ ಮಾಡಲಾಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ನಿವೃತ್ತ ಅಧಿಕಾರಿ ಲಕ್ಷ್ಮೀ ಅಶ್ವಿನ್ಗೌಡರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಚರ್ಚೆಯಾಗಿದೆ ಎಂದು ಅವರು ತಿಳಿಸಿದರು.
ಎಲ್.ಆರ್.ಶಿವರಾಮೇಗೌಡ ಮಾತನಾಡಿ, ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಾಗುವುದು. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾಮಪತ್ರ ಸಲ್ಲಿಸುವ ವೇಳೆ ಎಲ್ಲಾ ಮುಖಂಡರು ಉಪಸ್ಥಿತರಿರುತ್ತಾರೆ ಎಂದರು.