
ಬೆಂಗಳೂರು: ಶಿವಮೊಗ್ಗ ಲೋಕಸಭೆ ಉಪಚುನಾವಣೆಗೆ ಜೆಡಿಎಸ್ ನಿಂದ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲಾಗಿದೆ. ಈ ಮೂಲಕ ಶಿವಮೊಗ್ಗದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.
ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿದಿದ್ದರೆ ಬಿಜೆಪಿಯಿಂದ ಬಿ.ವೈ. ರಾಘವೇಂದ್ರ ಕಣದಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ಮಾಜಿ ಸಿಎಂಗಳಿಬ್ಬರ ಪುತ್ರರ ನಡುವೆ ಪ್ರತಿಷ್ಠೆಯ ಹೋರಾಟ ನಡೆಯಲಿದ್ದು, ನ.3ರ ಉಪಚುನಾವಣೆ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ.