ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಸಚಿವ ಎಂ.ಜೆ. ಅಕ್ಬರ್‌ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

ನವದೆಹಲಿ: ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಸಂಪಾದಕ ಹಾಗೂ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಪ್ರಿಯಾ ರಮಣಿ ಅವರು ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ಮತ್ತು ಮಾನಹಾನಿ ಮಾಡುವ ದುರುದ್ದೇಶದಿಂದ ಆರೋಪ ಮಾಡಿದ್ದು, ಮಾನನಷ್ಟ ಪ್ರಕರಣದಡಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ.ಜೆ.ಅಕ್ಬರ್ ಅವರು ಇಂದು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ವಕೀಲ ಕರಂಜಾವಾಲ ಅಂಡ್‌ ಕೋ ಅವರ ಮೂಲಕ ಎಂ.ಜೆ.ಅಕ್ಬರ್ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ.

ಅಕ್ಟೋಬರ್‌ 8ರಂದು ಪತ್ರಕರ್ತೆ ಪ್ರಿಯಾ ರಮಣಿ ಟ್ವೀಟ್‌ ಮಾಡಿ ಸಚಿವ ಅಕ್ಬರ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದರು. 1994ರಲ್ಲಿ ಅಕ್ಬರ್ ಸಂಪಾದಕರಾಗಿದ್ದಾಗ ನಾನು ಇಂಟರ್ನ್​ಶಿಪ್ ಮಾಡುತ್ತಿದ್ದೆ. ಆಗ ಅಕ್ಬರ್ ಲೈಂಗಿಕ ಕಿರುಕುಳ ನೀಡಿದ್ದರು ಎಂದು ದೂರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ