ಹ್ಯಾಟ್ರಿಕ್ ಹೀರೋ ಡಾ.ಶಿವರಾಜಕುಮಾರ್ ಮಲ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು, ಅ.15- ಜ್ವರದಿಂದ ಬಳಲುತ್ತಿದ್ದ ಹ್ಯಾಟ್ರಿಕ್ ಹೀರೋ ಡಾ.ಶಿವರಾಜಕುಮಾರ್ ಮಲ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಒಂದೆರಡು ದಿನಗಳಿಂದ ವೈರಲ್ ಫೀವರ್‍ನಿಂದ ಬಳಲುತ್ತಿದ್ದ ಅವರನ್ನು ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲಾ ರೀತಿಯ ತಪಾಸಣೆ ನಡೆಸಲಾಗಿದೆ.
ರಾತ್ರಿ ಜ್ವರ ಹೆಚ್ಚಾಗಿದ್ದರಿಂದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಚ್1 ಎನ್1 ಆತಂಕವು ರಾಜ್ಯದಲ್ಲಿ ಮನೆ ಮಾಡಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಪರೀಕ್ಷೆಗೆ ಒಳಪಡಿಸಲಾಗಿದ್ದು , ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಶಿವರಾಜ್‍ಕುಮಾರ್ ಹಾಗೂ ಸುದೀಪ್ ನಟಿಸಿರುವ ದಿ ವಿಲನ್ ಚಿತ್ರವು ಇದೇ ವಾರ ಬಿಡುಗಡೆಯಾಗುತ್ತಿದ್ದು ಭಾರೀ ನಿರೀಕ್ಷೆ ಮೂಡಿಸಿದೆ.
ಈ ಹಿನ್ನೆಲೆಯಲ್ಲಿ ಎಡೆಬಿಡದೆ ಚಿತ್ರದ ಕೆಲಸಗಳಲ್ಲಿ ಭಾಗಿಯಾಗಿದ್ದ ಶಿವರಾಜಕುಮಾರ್ ಅವರಿಗೆ ಬಳಲಿಕೆಯಿಂದ ಜ್ವರ ಬಂದಿದ್ದು ಸುಧಾರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ