
ಜಮಖಂಡಿ: ಬಾಗಲಕೋಟೆ ಜಿಲ್ಲೆ ಜಮಖಂಡಿ ವಿಧಾನಸಭೆ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಇಂದು ಜಮಖಂಡಿಯಲ್ಲಿ ಆಯೋಜಿಸಿದ್ದ ಬೃಹತ್ ರೋಡ್ ಶೋ ಹಾಗೂ ಬಹಿರಂಗ ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಭಾಗವಹಿಸಿದ್ದರು.
ಇದಕ್ಕೂ ಮೊದಲು ಬಳ್ಳಾರಿ ಜಿಲ್ಲಾಧಿಕಾರಿ ರಾಮಪ್ರಸಾದ್ ಮನೋಹರ್ ಅವರಿಗೆ ಕಾಂಗ್ರಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಕೆ ಶಿವಕುಮಾರ್, ಶಾಸಕರಾದ ಪಿ.ಟಿ ಪರಮೇಶ್ ನಾಯ್ಕ್, ಬೀಮನಾಯ್ಕ್, ರಾಜ್ಯಸಭಾ ಸದಸ್ಯರಾದ ನಾಸೀರ್ ಹುಸೇನ್ ಹಾಗೂ ಮತ್ತಿತರ ಮುಖಂಡರು ಹಾಜರಿದ್ದರು.