ಸರಿಯಾಗಿ ಪೂರೈಕೆ ಇಲ್ಲದ ಕಾರಣ ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ, ಸಿ.ಎಂ

ಬೆಂಗಳೂರು, ಅ.17- ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫೀಲ್ಡ್ ಸಂಸ್ಥೆಯು ಸರಿಯಾಗಿ ಕಲ್ಲಿದ್ದಲು ಪೂರೈಸದ ಕಾರಣ ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

1720 ಮೆಗಾವ್ಯಾಟ್ ಸಾಮಥ್ರ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಇದೆ.ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫೀಲ್ಡ್ಸ್ (ಡಬ್ಲ್ಯೂಎಲ್‍ಸಿ) ರವರು ಕಲ್ಲಿದ್ದಲು ಪೂರೈಕೆ ಒಪ್ಪಂದದ ಪ್ರಕಾರ ನೀಡ ಬೇಕಾಗಿದ್ದ ಕಲ್ಲಿದ್ದಲಿನ ಒಟ್ಟು ಪ್ರಮಾಣದಲ್ಲಿ ಸುಮಾರು 6 ಲಕ್ಷ ಟನ್‍ಗಳಷ್ಟು ಕಲ್ಲಿದ್ದಲನ್ನು ಈವರೆಗೆ ಪೂರೈಕೆ ಮಾಡಿಲ್ಲ. ಇದರಿಂದ ಕಲ್ಲಿದ್ದಲು ಕೊರತೆ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಪ್ರಮಾಣದ ಕೊರತೆಯನ್ನು ಕೇಂದ್ರ ಸರ್ಕಾರಿ ಸ್ವಾಮ್ಯದ ಎಂ.ಸಿ.ಎಲ್ ಮುಖಾಂತರ ಪೂರೈಕೆ ಮಾಡಬೇಕೆಂದು ಕೇಂದ್ರ ಕಲ್ಲಿದ್ದಲು ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಪತ್ರ ಮುಖೇನ ವಿನಂತಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಡಬ್ಲ್ಯುಸಿಎಲ್‍ನಿಂದ ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದ ಕಲ್ಲಿದ್ದಲು ಪೂರೈಕೆ ಮಾಡುವುದರೊಂದಿಗೆ ರಾಜ್ಯದಲ್ಲಿ ನಿರಂತರವಾಗಿ ನಿಗದಿತ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ಸಹಕರಿಸುವಂತೆ ಕೋರಿದ್ದೇನೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ