ಬೆಂಗಳೂರು: ಕಳೆದ ಎರಡು ದಿನಗಳಿಂದ ವೈರಲ್ ಫೀವರ್ನಿಂದ ಬಳಲುತ್ತಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಆರೋಗ್ಯವಾಗಿದ್ದು, ಮಲ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜ್ವರ, ಮೈಕೈ ನೋವಿನಿಂದ ಶಿವಣ್ಣ ಸೋಮವಾರ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿನ ವೈದ್ಯರು ಶಿವರಾಜ್ಕುಮಾರ್ ಅವರಿಗೆ ಚಿಕಿತ್ಸೆ ನೀಡಿ 48 ಗಂಟೆವರೆಗೂ ಜ್ವರ ಮರುಕಳಿಸದಿದ್ದರೆ ಡಿಸ್ಚಾರ್ಜ್ ಮಾಡುವುದಾಗಿ ಹೇಳಿದ್ದರು.
ಜ್ವರ ಮರುಕಳಿಸದ ಕಾರಣ ಇಂದು ಮಧ್ಯಾಹ್ನ ಶಿವರಾಜ್ಕುಮಾರ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಇನ್ನೂ ಎರಡು ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಇದೇ ವೇಳೆ ವೈದರು ಸೂಚಿಸಿದ್ದಾರೆ.