ಬೆಂಗಳೂರು, ಅ.18-ಕುಟುಂಬದವರೆಲ್ಲ ಗೋವಾಕ್ಕೆ ತೆರಳಿದ್ದಾಗ ಮನೆಯ ಮುಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಎಚ್ಎಎಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎಸಿಎಸ್ ಲೇಔಟ್ನಲ್ಲಿ ಸಂತೋಷ್ ಎಂಬುವರು ವಾಸವಾಗಿದ್ದು, ಇವರು ಕುಟುಂಬ ಸಮೇತ ಗೋವಾಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕಳ್ಳರು ಇವರ ಮನೆಯ ಬಾಗಿಲು ಮುರಿದು ಒಳನುಗ್ಗಿ ಬೀರುವನ್ನು ಒಡೆದು ಅದರಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಕೈಗೆ ಸಿಕ್ಕಿದ ಚಿನ್ನಾಭರಣ ಕದ್ದೊಯ್ದಿದ್ದಾರೆ.
ನಿನ್ನೆ ರಾತ್ರಿ ಸಂತೋಷ್ ಕುಟುಂಬ ಮನೆಗೆ ವಾಪಸ್ಸಾದಾಗಲೇ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಕಳುವಾಗಿರುವ ವಸ್ತುಗಳ ಮೌಲ್ಯ ನಿಖರವಾಗಿ ತಿಳಿದುಬಂದಿಲ್ಲವಾದರೂ ಅಂದಾಜು 2.30 ಲಕ್ಷ ರೂ. ನಿಂದ 3 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎನ್ನಲಾಗಿದೆ.
ಈ ಬಗ್ಗೆ ಎಚ್ಎಎಲ್ ಠಾಣೆ ಪೆÇಲೀಸರು ದೂರು ದಾಖಲಿಸಿದ್ದಾರೆ.