ನವದೆಹಲಿ: ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ನಾಯಕರ ವಿರುದ್ಧ ಅಸಂಬದ್ಧ ಹೇಳಿಕೆಯೊಂದನ್ನು ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಪ್ರಭಾತ್ ಝಾ, ಕಾಂಗ್ರೆಸ್ನಲ್ಲಿ ಎಷ್ಟರ ಮಟ್ಟಿಗೆ ಹೊಗಳುಭಟ್ಟತನ ಇದೆ ಎಂದರೆ, ಪಕ್ಷದ ನಾಯಕರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯ ಮೂತ್ರವನ್ನು ಸಹ ಕುಡಿಯುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ನಾಯಕರಾದ ಕಮಲ್ ನಾಥ್ ಹಾಗೂ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿರುವ ಪ್ರಭಾತ್ ಝಾ ಅವರನ್ನು ಅವಮಾನ ಮಾಡಿದ್ದಾರೆ. ಕಮಲ್ ನಾಥ್ ಅಸಹ್ಯಕರ ರೀತಿಯಲ್ಲಿ ಮಾತನಾಡುತ್ತಾರೆ ಎಂದಿದ್ದಾರೆ.
ಬಿಜೆಪಿ ನಾಯಕನ ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.