ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ: ಹಿಂದೆ ಹೇಗೆ ನಡೆದುಕೊಂಡು ಬಂದಿದೆ ಹಾಗೇ ನಡೆದುಕೊಂಡು ಹೋಗಲಿ: ಸಿಎಂ ಕುಮಾರಸ್ವಾಮಿ

ಮೈಸೂರು: ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಕುರಿತು ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಹಿಂದಿನಿಂದ ನಡೆಸಿಕೊಂಡು ಬಂದಿರುವ ಶಿಷ್ಟಾಚಾರ ಉಲ್ಲಂಘನೆ ಮಾಡಿ ಅಗೋಚರ ಶಕ್ತಿಗಳ ವಿರುದ್ಧ ನಾವು ಸಂಘರ್ಷ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ವೈಜ್ಞಾನಿಕವಾಗಿ ನಾವು ದಾಪುಗಾಲು ಇಟ್ಟು ಮುಂದೆ ಹೋಗುತ್ತಿದ್ದೇವೆ. ಸ್ವಲ್ಪ ವರ್ಷಗಳು ಕಳೆದರೆ ಚಂದ್ರಲೋಕದಲ್ಲಿ ವಾಸ ಮಾಡುವ ವ್ಯವಸ್ಥೆ ಮಾಡುತ್ತಾರೆ. ಇಷ್ಟೆಲ್ಲ ಮುಂದುವರೆದರು ಯಾವುದಕ್ಕೂ ಪ್ರಕೃತಿ ವಿಕೋಪಗಳು ತಡೆಯಲಾಗುತ್ತಿಲ್ಲ ಎಂದರು.

ನಮ್ಮ ಸಂಸ್ಕೃತಿಯನ್ನು ಪೂರ್ವಿಕರು ಮಾಡುವಾಗ ಅವರದ್ದೇ ಉದ್ದೇಶಗಳು ಇರುತ್ತವೆ. ಇದೀಗ ಆ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು. ಹಿಂದೆ ಹೇಗೆ ನಡೆದುಕೊಂಡು ಬಂದಿದೆ ಹಾಗೇ ನಡೆದುಕೊಂಡು ಹೋಗಲಿ. ಇದನ್ನು ನಾನು ಸಿಎಂ ಆಗಿ ಹೇಳಿದ್ದಲ್ಲ, ಬದಲಾಗಿ ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ